May 20, 2026
Every word spoken in this episode is indexed. Type any phrase to jump straight to the moment it was said.
Type any word or phrase that may have been spoken. Click a result to seek the player to that exact moment.
Try a name, a topic, or a quoted line
2:28Now Playingನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಜಾಲದ ಮೇಲೆ ದಾಳಿ ನಡೆಸಿರುವ ಬೆಂಗಳೂರು ನಗರ ಪೊಲೀಸರು, ಮೂವರು ವಿದೇಶಿ ಪ್ರಜೆಗಳು, ಹೊರ ರಾಜ್ಯಗಳ ಮೂವರು ಹಾಗೂ ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 17 ಕೆಜಿ 500 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಮತ್ತು 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂದಾಜು ಮೌಲ್ಯ ₹17.50 ಕೋಟಿಗಳಾಗಿದ್ದು, ಇದರ ಮುಕ್ತ ಮಾರುಕಟ್ಟೆ ಮೌಲ್ಯ ಸುಮಾರು ₹35 ಕೋಟಿಗಳಾಗಿರುತ್ತದೆ.
ಉತ್ತರ ವಿಭಾಗದ ಪೊಲೀಸ್ ಉಪ ಆಯುಕ್ತರಾದ ಶ್ರೀ ಬಿ.ಎಸ್. ನೇಮಗೌಡ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಜೆ.ಸಿ. ನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಕೆ.ಎಸ್. ತನ್ವೀರ್ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.
ಮಾದಕ ವಸ್ತುಗಳ ಅಕ್ರಮ ಸಾಗಾಟ, ಮಾರಾಟ ಅಥವಾ ಬಳಕೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ, ಸಾರ್ವಜನಿಕರು ತಕ್ಷಣವೇ '112' ತುರ್ತು ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಜಾಗರೂಕರಾಗಿ ಮಾಹಿತಿ ನೀಡಬೇಕಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಕೋರಿದೆ.
ಸುರಕ್ಷಿತ ಹಾಗೂ ಮಾದಕ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
A total of 8 persons arrested, including three foreign nationals, three persons from other states, and two persons from Karnataka, for selling the banned narcotic substance MDMA.
In total, 17 kg 500 grams of MDMA and 2 cars seized; worth ₹17.50 crore (market value ₹35 crore).
This successful operation was carried out under the guidance of Shri B.S. Nemagouda, IPS, Deputy Commissioner of Police, North Division, and under the leadership of Shri K.S. Tanveer, Assistant Commissioner of Police, J.C. Nagar Sub-Division.
Bengaluru City Police urges citizens to stay vigilant and report any information related to drug trafficking or consumption by dialing 112 or contacting the nearest police station.
Together, let us build a safer and drug-free Bengaluru.
#SayNoToDrugs #DrugFreeBengaluru #BengaluruCityPolice #AntiDrugOperation #StayAlert
Sentinel Indexing in Progress
Metadata and chapters are available. Claim extraction for this episode is pending.
All video content is delivered via YouTube embedded players in accordance with the YouTube Terms of Service. Sentinel provides research tools that promote discovery and accountability across political media.